ಸ್ವದೇಶಿ ಕ್ರೀಡಾ ಪಂದ್ಯಾವಳಿಗಳು ಹೆಚ್ಚು ನಡೆಯಲಿ; ಮಾನ್ವಿ ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಲಹೆ

10072022 Manvi sports
Published on


ಮಾನ್ವಿ: ಸ್ವದೇಶಿ ಕ್ರೀಡೆಗಳು ಮರೆಯಾಗುತ್ತಿದ್ದು, ಯುವಕರು ಸ್ವದೇಶಿ ಕ್ರೀಡೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕಲ್ಮಠದ ವಿರೂಪಾಕ್ಷ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕರ ಹುಟ್ಟುಹಬ್ಬದ ಅಂಗವಾಗಿ ಕೆಎಸ್‌ಎನ್ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ಕ್ರೀಡಾ ಸ್ಫೂರ್ತಿಯಿಂದ ಆಟಗಳಲ್ಲಿ ಭಾಗವಹಿಸಬೇಕು. ಗೆದ್ದಾಗ ಹಿಗ್ಗಬಾರದು ಹಾಗೂ ಸೋತಾಗ ಕುಗ್ಗಬಾರದು. ಸೋಲು ಗೆಲುವಿಗೆ ಮೆಟ್ಟಿಲಾಗುತ್ತದೆ ಎಂದರು.

ಜಿಲ್ಲೆಯ ವಿವಿಧ ತಾಲೂಕುಗಳಿಂದ 28 ತಂಡಗಳು ಟೂರ್ನಿಯಲ್ಲಿ ಭಾಗವಹಿಸಿವೆ. ಈ ಭಾಗದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ನಡೆಯುತ್ತಿರುವುದು ಇದೇ ಮೊದಲು. ಪ್ರಥಮ ಬಹುಮಾನ ಒಂದು ಲಕ್ಷ ರೂ. ದ್ವಿತೀಯ ಬಹುಮಾನ 50 ಸಾವಿರ ರೂ., ಹಾಗೂ ತೃತೀಯ ಬಹುಮಾನ 20 ಸಾವಿರ ಮತ್ತು ಟ್ರೋಫಿ ಇದೆ ಎಂದು ಸ್ವಾಮೀಜಿ ತಿಳಿಸಿದರು.

ಮಾನ್ವಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ತಿಮ್ಮಯ್ಯ ಶೆಟ್ಟಿ, ಶಂಕರಯ್ಯಸ್ವಾಮಿ ಸುವರ್ಣಗಿರಿಮಠ, ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಕಾರ್ಯದರ್ಶಿ ರವಿಕುಮಾರ ಪಾಟೀಲ್, ಪ್ರಮುಖರಾದ ಮಾನಪ್ಪ ನಾಯಕ, ಮಲ್ಲಿಕಾರ್ಜುನ ಜಕ್ಕಲದಿನ್ನಿ, ತಿಮ್ಮಾರಡ್ಡಿ ಭೋಗಾವತಿ, ಅಕ್ಬರ್ ಪಾಷಾ, ವೀರೇಶ ನಾಯಕ ಬೆಟ್ಟದೂರು, ನಾಗಲಿಂಗಸ್ವಾಮಿ, ಉಮಾಪತಿಸ್ವಾಮಿ, ಉಮಾಕಾಂತ ಸೀಕಲ್, ಜಯರಾಜ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net