ವ್ಯಸನಮುಕ್ತ ಸಮಾಜ ನಿರ್ಮಿಸಿ

Untitled design(1)
Published on

ಮಾನ್ವಿ: ಇಂದಿನ ಯುವಕರು ಮಾದಕ ವ್ಯಸನದಿಂದ ಮುಕ್ತವಾದ ಸಮಾಜವನ್ನು ನಿರ್ಮಿಸುವ ಗುರಿ ಹೊಂದಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಸಂಯೋಜಕ ಬಾವಸಲಿ ಹೇಳಿದರು.

ತಾಲೂಕಿನ ಮದ್ಲಾಪೂರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ರಾಯಚೂರು ಜಂಟಿಯಾಗಿ ಹಮ್ಮಿಕೊಂಡಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಶ್ವಸಂಸ್ಥೆಯು 1987ರಿಂದ ವ್ಯಸನ ಮುಕ್ತವಾದ ಸಮಾಜವನ್ನು ನಿರ್ಮಿಸುವ ಗುರಿಯೊಂದಿಗೆ ಕಾರ್ಯಕ್ರಮ ಆಯೋಜಿಸುತ್ತಿದೆ. ಯುವಕರು, ವಿದ್ಯಾರ್ಥಿಗಳು ಉತ್ತಮ ಆರೋಗ್ಯಕಡೆ ಗಮನ ಹರಿಸಲಿ. ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಲಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರದ ಅಧಿಕಾರಿ ಮುಕ್ಕಣ್ಣ, ಮದ್ಲಾಪೂರ್ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಯೂನಿಸ್‌ಬಾಬು, ಸಹ ಶಿಕ್ಷಕರಾದ ದೇವಪ್ಪ, ಶ್ರೀಕಾಂತ, ಸುಭಾಶ, ಸಂದೀಪ, ಮಾಜೀದ್ ಅಲಿ ಖಾನ್, ತಸ್ಲೀಮ್ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net