ಚಿರಂತನ ಶಾಲಾ ಮಕ್ಕಳಿಗೆ ಹಲವು ಪ್ರಶಸ್ತಿ

ಚಿರಂತನ ಶಾಲಾ ಮಕ್ಕಳಿಗೆ ಹಲವು ಪ್ರಶಸ್ತಿ
Published on

ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕ್ಲಸ್ಟರ್ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ಚಿರಂತನ ಆಂಗ್ಲ ಮಾಧ್ಯಮ ಶಾಲೆಯ ಬಾಲಕ, ಬಾಲಕಿಯರು ಭಾಗವಹಿಸಿ ವಿವಿಧ ಪ್ರಶಸ್ತಿ ಪಡೆದಿದ್ದಾರೆ.

ಬಾಲಕರ ವಿಭಾಗದಲ್ಲಿ ಖೋ-ಖೋ, ಕಬಡ್ಡಿ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ ಮತ್ತು 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಕಬಡ್ಡಿ, ಪ್ರಥಮ ಸ್ಥಾನ, ಗುಂಡು ಎಸೆತ ದ್ವಿತೀಯ ಸ್ಥಾನ, ತಟ್ಟೆ ಎಸೆತದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿಜೇತರಿಗೆ ಶಿಕ್ಷಕರು, ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net