ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪಕ್ಷಾಂತರ ಪರ್ವ: ನಿರೀಕ್ಷೆಯಂತೆ ಜೆಡಿಎಸ್ ಮಾಜಿ ಎಂಎಲ್ಸಿಗಳಾದ ಅಪ್ಪಾಜಿಗೌಡ, ಮರಿತಿಬ್ಬೇಗೌಡ ಕಾಂಗ್ರೆಸ್ ಸೇರ್ಪಡೆ...!

Many leaders joined the Congress mandya
Published on

ಮಂಡ್ಯ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಜಿಲ್ಲೆಯ ಮುಖಂಡರು ವಿವಿಧ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ನಿನ್ನೆಯಷ್ಟೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರೂ ಆದ ಜೆಡಿಎಸ್ ಮುಖಂಡ ಎನ್.ಅಪ್ಪಾಜಿಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರ ಅಳಿಯ ಎಚ್.ಎನ್.ಯೋಗೇಶ್ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡ ತಗ್ಗಹಳ್ಳಿ ವೆಂಕಟೇಶ್ ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮುಖಂಡರಿಗೆ ಪಕ್ಷದ ಬಾವುಟ ಕೊಟ್ಟು ಸ್ವಾಗತಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಸ್ಟಾರ್ ಚಂದ್ರು ಇದ್ದರು.

ಲೋಕಸಭಾ ಚುನಾವಣೆ ರಂಗೇರುತ್ತಿರುವ ಹೊತ್ತಿನಲ್ಲಿ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ಇದು ಚುನಾವಣೆಯಲ್ಲಿ ಎಷ್ಟರಮಟ್ಟಿಗೆ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net