ರಕ್ತದಾನದಿಂದ ಹಲವು ಜೀವ ಉಳಿಸಿದ ಪುಣ್ಯ

Bel_Blood Camp
Published on

ಬೆಳ್ತಂಗಡಿ: ರಕ್ತದಾನ ಅತ್ಯಂತ ಶ್ರೇಷ್ಠ ದಾನ. ಇದರಿಂದ ಹಲವಾರು ಜೀವ ಉಳಿಸಿದಂತಹ ಪುಣ್ಯಪ್ರಾಪ್ತಿಯಾಗುತ್ತದೆ. ಇಂತಹ ಕಾರ್ಯಕ್ರಮಗಳಿಂದ ಯುವಜನತೆ ದಾನದ ಗುಣವನ್ನು ಮೈಗೂಡಿಸಿಕೊಳ್ಳಲು ಸಾಧ್ಯ ಎಂದು ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ.ಹೇಳಿದರು.

ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಂಜುಶ್ರೀ ರೋವರ್ಸ್ ಘಟಕ, ಹಳೇವಿದ್ಯಾರ್ಥಿ ಸಂಘ, ಪದ್ಮಾಂಬ ಸಮೂಹ ಸಂಸ್ಥೆಗಳು, ವೇಣೂರು ಹಾಲು ಉತ್ಪಾದಕರ ಸಹಕಾರಿ ಸಂಘ, ಕುಕ್ಕೇಡಿ ಗ್ರಾಮ ಪಂಚಾಯಿತಿ ಮತ್ತು ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಐಟಿಐ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್ ಕೆ.ಆರ್.ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಕೆ.ಎಂ.ಸಿ.ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರೇಮಿ ಮಾಹಿತಿ ನೀಡಿದರು. ಎನ್.ಜೆ.ನಾಗೇಶ್, ಮಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಜಯರಾಜ್ ಪ್ರಕಾಶ್, ಪಾಕಶಾಸ್ತ್ರಜ್ಞ ನಾಗಕುಮಾರ್ ಜೈನ್, ಜೀವವಿಮಾ ಪ್ರತಿನಿಧಿ ಜಗನ್ನಾಥ ದೇವಾಡಿಗ, ಕುಕ್ಕೇಡಿ ಗ್ರಾಪಂ ಅಧ್ಯಕ್ಷೆ ಅನಿತಾ ಕೆ., ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಪದ್ಮಾಂಬ ಸಮೂಹ ಸಂಸ್ಥೆಗಳ ಮಾಲೀಕ ಜಿನರಾಜ್ ಜೈನ್, ಫಲ್ಗುಣಿ ಸೇವಾ ಸಂಘದ ಅಧ್ಯಕ್ಷ ವಿ.ಎಸ್.ಜಯರಾಜ್, ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರ್ಮಲ್ ಕುಮಾರ್ ಬೊಳ್ಜಾಲ್ ಗುತ್ತು, ಸೌತ್‌ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷೆ ಸಿಲ್ವಿಯಾ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ, ಶ್ರೀದೇವಿ ಮಹಮ್ಮಾಯಿ ಮಾರಿಗುಡಿ ಮಂಗಳತೇರು ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಗೌಡ, ದೇವಾಡಿಗರ ಸೇವಾ ವೇದಿಕೆ ಗೌರವಾಧ್ಯಕ್ಷ ಎಂ.ಸುಂದರ ಉಪಸ್ಥಿತರಿದ್ದರು.

108 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪದ್ಮಪ್ರಸಾದ್ ಬಸ್ತಿ ಸ್ವಾಗತಿಸಿದರು. ಜಾಕೊಬ್ ಟಿ.ವಿ.ವಂದಿಸಿದದರು. ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿ ಸತೀಶ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net