ಸ್ವಾವಲಂಬನೆ ಬದುಕಿಗೆ ಹಲವು ಯೋಜನೆ

11-8-2023KDL-1 MRP
Published on

ಕುಂದಗೋಳ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಗ್ರ ಅಭಿವೃದ್ಧಿಗಾಗಿ ಶಿಕ್ಷಣ, ಆರೋಗ್ಯ, ವ್ಯಾಪಾರ ಹಾಗೂ ಆರ್ಥಿಕ ಸ್ವಾವಲಂಬನೆಯ ಬದುಕಿಗಾಗಿ ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಎಂ.ಆರ್. ಪಾಟೀಲ ಹೇಳಿದರು.

ಪಟ್ಟಣದ ಕಲ್ಯಾಣಪುರದ ಬಸವಣ್ಣಜ್ಜನವರ ಮಠದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯುವ ಜನತೆಗೆ ಕೌಶಲಾಭಿವೃದ್ಧಿ ತರಬೇತಿ, ಉದ್ಯಮಶೀಲತೆ ಅಭಿವೃದ್ಧಿ, ಹಿರಿಯ ನಾಗರಿಕರ ಆರೈಕೆ ಹಾಗೂ ನೆರವು ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸ್ವಯಂ ಉದ್ಯೋಗ ತರಬೇತಿ ಹಾಗೂ ವಿವಿಧ ಇಲಾಖೆಗಳಿಂದ ಸೌಲಭ್ಯಗಳನ್ನು ಒದಗಿಸಿಕೊಟ್ಟಿರುವ ಕುರಿತು ಮಾಹಿತಿ ಹಂಚಿಕೊಂಡರು.

ಶ್ರೀ ಅಭಿನವ ಬಸವಣ್ಣಜ್ಜನವರ ಸಾನ್ನಿಧ್ಯ ವಹಿಸಿದ್ದರು. ಸಂಶಿ ಗ್ರಾಪಂ ಅಧ್ಯಕ್ಷ ರಾಜೀವ ಪುಟ್ಟಣ್ಣನವರ, ಸುರೇಶ ಮಾಕಪ್ಪನವರ, ಸಹದೇವ ಮಾಳಗಿ, ಶಿವಪುತ್ರಪ್ಪ ಆರ್.ಎಸ್. ಭೀಮಪ್ಪ ಎನ್.ಎಂ. ಪ್ರಿಯದರ್ಶಿನಿ ಹಿರೇಮಠ, ಮೀನಾಕ್ಷಿ ಗುದಿಯವರ, ಗೋಪಾಲ ದೊಡಮನಿ, ರವಿಗೌಡ ಪಾಟೀಲ, ಮಾಲತೇಶ ಶ್ಯಾಗೋಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net