

ಆಲೂರು: ಆಲೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಣತೂರು ಸರ್ಕಾರಿ ಪದವಿಪೂರ್ವ ಕಾಲೇಜು ಹಲವು ಬಹುಮಾನಗಳನ್ನು ಪಡೆದುಕೊಂಡಿದೆ.
ಆ.27ರಂದು ನಡೆದ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಣತೂರು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕ್ರೀಡಾಕೂಟದಲ್ಲಿ ಬಹುತೇಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಬಾಲಕರ ವಿಭಾಗದಲ್ಲಿ: ಕಬಡ್ಡಿ ಪ್ರಥಮ ಸ್ಥಾನ, ಥ್ರೋಬಾಲ್ ದ್ವಿತೀಯ ಸ್ಥಾನ, 200 ಮೀಟರ್ ಓಟದಲ್ಲಿ ನಾಗರಾಜು ದ್ವಿತೀಯ ಸ್ಥಾನ, 800 ಮೀಟರ್ ಓಟದಲ್ಲಿ ಸಂತೋಷ್ ದ್ವಿತೀಯ ಸ್ಥಾನ, 3000 ಮೀಟರ್ ಓಟದಲ್ಲಿ ಸೋಮಶೇಖರ ದ್ವಿತೀಯ ಸ್ಥಾನ, 1500 ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಬಾಲಕಿಯರ ವಿಭಾಗದಲ್ಲಿ: 4*100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಎಲ್ಲ ವಿದ್ಯಾರ್ಥಿಗಳನ್ನು ಕಣತೂರು ಕಾಲೇಜು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪ್ರಾಂಶುಪಾಲೆ ಮಲ್ಲಿಗಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ರೇಣುಕಾ ಪ್ರಸಾದ್, ಉಪನ್ಯಾಸಕರು ಹಾಗೂ ಸಿಬ್ಬಂದಿ ಹಾಜರಿದ್ದರು.