

ಮದ್ದೂರು: ಆರ್ಥಿಕವಾಗಿ ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಗ್ರಾಮೀಣ ಕೈಗಾರಿಗಳು ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ವತಿಯಿಂದ 2023-24ನೇ ಸಾಲಿನ ವಿಶೇಷ ಘಟಕ, ಗಿರಿಜನ ಉಪ ಯೋಜನೆ ಹಾಗೂ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳು ಹಾಗೂ ಪವರ್‌ಟೂಲ್ಸ್ ಮರಗೆಲಸ, ಗಾರೆ ಕೆಲಸ, ಕ್ಷೌರಿಕ ಹಾಗೂ ಧೋಬಿ ಜನಾಂಗದ ವೃತ್ತಿ ನಿರತ ಕುಶಲಕರ್ಮಿಗಳಿಗೆ ಸರ್ಕಾರದಿಂದ ಬಂದಿರುವ ಉಪಕರಣಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಪ್ರತಿಯೊಬ್ಬರೂ ಆರ್ಥಿಕವಾಗಿ ಸ್ವಾವಲಂಬಿಯಾಗುವ ಮೂಲಕ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.