ಮರ ಬಿದ್ದು ಸಂಚಾರದಲ್ಲಿ ವ್ಯತ್ಯಯ

ಮರ ಬಿದ್ದು ಸಂಚಾರದಲ್ಲಿ ವ್ಯತ್ಯಯ
Published on

ಸಿದ್ದಾಪುರ: ಸಿದ್ದಾಪುರ-ಮೈಸೂರು ಮಾರ್ಗದ ಘಟ್ಟತಾಳ ಎಂಬಲ್ಲಿ ಗುರುವಾರ ಮಧ್ಯಾಹ್ನ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರದಲ್ಲಿ ಅಡಚಣೆ ಉಂಟಾಯಿತು.

ರಸ್ತೆ ಬದಿಯಲ್ಲಿದ್ದ ಕಡಕಲ್ ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸಿದ್ದಾಪುರ-ಮೈಸೂರು, ಪಿರಿಯಾಪಟ್ಟಣ ಸಂಪರ್ಕ ರಸ್ತೆಯಲ್ಲಿ ತೆರಳುವ ವಾಹನಗಳು ಮರ ತೆರವುಗೊಳಿಸುವವರೆಗೆ ಕಾಯಬೇಕಾಯಿತು. ಮರ ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ಸುತ್ತಮುತ್ತಲ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು. ಸಿದ್ದಾಪುರ ಸೆಸ್ಕ್ ಸಿಬ್ಬಂದಿ ಹಾಗೂ ಸ್ಥಳೀಯ ಎಸ್ಟೇಟ್ ಕಾರ್ಮಿಕರು ಮರ ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net