ಮಾರಚಾಕನಹಳ್ಳಿ ಗ್ರಾಪಂ ಅಧ್ಯಕ್ಷೆಯಾಗಿ ರೇಖಾ, ಉಪಾಧ್ಯಕ್ಷರಾಗಿ ಲಕ್ಷ್ಮೀ ಅವಿರೋಧ ಆಯ್ಕೆ

001
Published on

ಮಂಡ್ಯ: ತಾಲೂಕಿನ ಮಾರಚಾಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರೇಖಾ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 9 ಸದಸ್ಯ ಬಲ ಹೊಂದಿರುವ ಗ್ರಾಮ ಪಂಚಾಯಿತಿಗೆ ಬುಧವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ರೇಖಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಿ ಅವರನ್ನೊರತುಪಡಿಸಿ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಶಶಿಧರ್ ಅವರು ಇಬ್ಬರ ಆಯ್ಕೆಯನ್ನು ಘೋಷಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ ಮುಖಂಡರಾದ ಡಿ. ಚಿಕ್ಕಯ್ಯ, ಮಂಜುನಾಥ್, ಸುನೀತಾರಾಜ್, ಕರಣ್‌ಕುಮಾರ್, ಆಟೋ ಬಸವ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net