

ಸೋಮವಾರಪೇಟೆ: ಪಟ್ಟಣ ಪಂಚಾಯಿತಿ ಮತ್ತು ಲಯನ್ಸ್ ಕ್ಲಬ್ ವತಿಯಿಂದ ಹರ್ ಘರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ ಬುಧವಾರ ಮ್ಯಾರಥಾನ್ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಚಾಲನೆ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಲಯನ್ಸ್ ಅಧ್ಯಕ್ಷ ಸಿ.ಕೆ.ಶಿವಕುಮಾರ್, ವಲಯ ಅಧ್ಯಕ್ಷ ಸಿ.ಕೆ.ರೋಹಿತ್, ಮಾಜಿ ಸೈನಿಕ ಚಂದ್ರಕುಮಾರ್ ಇತರರು ಭಾಗವಹಿಸಿದ್ದರು. ಬೇಳೂರು ಬಾಣೆದಿಂದ ಸೋಮವಾರಪೇಟೆ ಪದವಿಪೂರ್ವ ಕಾಲೇಜಿನವರೆಗೆ ಓಟವನ್ನು ಆಯೋಜಿಸಲಾಗಿತ್ತು.