

ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಉಪಸಮಿತಿಗಳು, ಸಿಬ್ಬಂದಿ ಮತ್ತು ನೌಕರರ ಸಹಕಾರದಲ್ಲಿ ಏ.8, 9ರಂದು ಪ್ರಥಮ ಹರಕೆ ಮಾರಿಪೂಜೆ ನಡೆಯಲಿದೆ ಎಂದು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಹೇಳಿದರು.
ಮಂಗಳವಾರ ಸಮಾಲೋಚನಾ ಸಭೆಯಲ್ಲಿ ಮಾಹಿತಿ ನೀಡಿ, 8ರಂದು ಸಂಜೆ 5ಕ್ಕೆ ಹೂ-ಹಿಂಗಾರ ಮೆರವಣಿಗೆ, 8.30ಕ್ಕೆ ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವರ ಸನ್ನಿಧಾನದಿಂದ ರಜತ ರಥದಲ್ಲಿ ಮಾರಿಯಮ್ಮನ ಆಗಮನವಾಗಲಿದೆ. ರಾತ್ರಿ 10.30ಕ್ಕೆ ದರ್ಶನ ಸೇವೆ ನೆರವೇರಲಿದೆ. 9ರಂದು ಮಧ್ಯಾಹ್ನ 3ಕ್ಕೆ ದರ್ಶನ ಸೇವೆ. ಸಂಜೆ 7ರಿಂದ 10ರ ತನಕ ಮಾರಿಪೂಜೆಯ ಅನ್ನಪ್ರಸಾದ ವಿತರಣೆಯಾಗಲಿದೆ ಎಂದರು.
ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ನವದುರ್ಗಾ ಲೇಖನಯಜ್ಞ ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್.ಪಾಲನ್, ಬೆಳಪು ದೇವಿಪ್ರಸಾದ್ ಶೆಟ್ಟಿ, ಗಂಗಾಧರ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಭಗವಾನ್ ದಾಸ್ ಶೆಟ್ಟಿಗಾರ್, ಮಹಿಳಾ ವಿಭಾಗ ಕಾರ್ಯಾಧ್ಯಕ್ಷೆ ಬೀನಾ ವಿ.ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ಸಾಲ್ಯಾನ್, ರವೀಂದ್ರ ಮಲ್ಲಾರು, ಮನೋಹರ ರಾವ್ ಕಲ್ಯ, ಚರಿತಾ ದೇವಾಡಿಗ ಉಪಸ್ಥಿತರಿದ್ದರು.