ಹೊಸಪೇಟೆ : ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲಾತಿ ಮಾಡಲು ಅರ್ಹ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಮುಖ್ಯಾಧಿಕಾರಿ ಎಂ.ಖಾಜಾ ತಿಳಿಸಿದ್ದಾರೆ.
ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು ಫೆ.12 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಡೇ-ನಲ್ಮ್ ಶಾಖೆಗೆ ಸಂಪರ್ಕಿಸುವುದು.