ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಸರ್ಕಾರಿ ಬಸ್: ಅದೃಷ್ಟವಶಾತ್ ಎಲ್ಲರೂ ಪಾರು

MM Halli NH Govt Bus palti
ಮರಿಯಮ್ಮನಹಳ್ಳಿ ಸಮೀಪದ 114 ಡಣಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿರುವುದು.
Published on

ಮರಿಯಮ್ಮನಹಳ್ಳಿ: ಸಮೀಪದ 114 ಡಣಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗಿನ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಮೈಸೂರಿನಿಂದ ಹೊಸಪೇಟೆಗೆ ಹೊರಟಿದ್ದ ಬಸ್‌ನಲ್ಲಿ 15 ಜನ ಪ್ರಯಾಣಿಕರು ಇದ್ದರು. ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್ ಉರುಳಿದೆ. ಸಣ್ಣ ಪುಟ್ಟ ಗಾಯಗಳಾದ ಪ್ರಯಾಣಿಕರಿಗೆ ಮತ್ತೊಂದು ಬಸ್ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net