

ಚಿಕ್ಕಬಳ್ಳಾಪುರ/ಶಿಡ್ಲಟ್ಟ: ಕೃಷಿ ಬೆಳೆಯ ನಡುವೆ ಅಕ್ರಮವಾಗಿ ಮಾದಕ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು 1.05 ಲ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.ಶಿಡ್ಲಟ್ಟ ತಾಲೂಕಿನ ದಿಬ್ಬೂರಹಳ್ಳಿ&ದಾಸರಹಳ್ಳಿಯ ಜನಮಡುಗಪ್ಪ ಅಲಿಯಾಸ್ ಲಂಬು (55) ಆರೋಪಿ. ಕೃಷಿ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆ ನಡುವೆ ಗಾಂಜಾ ಗಿಡಗಳನ್ನು ಬೆಳೆದಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಿಡ್ಲಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣೆ ಪೊಲೀಸರು 4.70 ಕೆ.ಜಿ. ಗಾಂಜಾ ಗಿಡವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜಾ ಇಮಾಮ್ ಖಾಸಿಂ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಪಿ.ಮುರಳೀಧರ್, ಸಿಪಿಐ ಎಂ.ಶ್ರೀನಿವಾಸ, ದಿಬ್ಬೂರಹಳ್ಳಿ ಠಾಣೆ ಪಿಎಸ್ಐ ಶ್ಯಾಮಲಾ ನೇತೃತ್ವದ ತಂಡವು ಕಾರ್ಯಾಚರಣೆ ಕೈಗೊಂಡಿತ್ತು. ಪೋಲಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.