ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ವಾರ್ಷಿಕೋತ್ಸವ

24MDK04
Published on

ಮಡಿಕೇರಿ:

ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿ?್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿ?್ಠಾಪನಾ ಮಹೋತ್ಸವ, ನಾಗದರ್ಶನ, ಪಾ?ಾಣಮೂರ್ತಿ ದೈವದ ಪ್ರತಿ?್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲ ಶ್ರದ್ಧಾಭಕ್ತಿಯಿಂದ ಮಂಗಳವಾರ ನಡೆಯಿತು.

ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು.

ವಾರ್ಷಿಕೋತ್ಸವದ ಪ್ರಯುಕ್ತ ಮುಂಜಾನೆಯಿಂದಲೇ ಮಹಾಗಣಪತಿ ಹೋಮ, ನವಕ ಪಂಚಗವ್ಯ, ಕಳಸ ಪೂಜೆ, ಕಳಶಾಭಿಷೇಕ ಸರ್ವಾಲಂಕಾರ, ಮಹಾಪೂಜೆ ಹಾಗೂ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಮತ್ತು ಮಂಗಳಾರತಿ, ವಿಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭಿಷೇಕ ನಡೆಯಿತು.

ಪೂರ್ವಾಹ್ನ ನಾಗದರ್ಶನ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನದಾನ ಏರ್ಪಡಿಸಲಾಗಿತ್ತು.
ಉಡುಪಿಯ ಪೆಲರ್ಂಪಾಡಿ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿ?್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಟ್ಟರು.

ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net