ಜಿಲ್ಲಾದ್ಯಂತ ಸಂಚರಿಸಿ ಸಮಸ್ಯೆಗಳ ಪಹರಿಸಲು ಕ್ರಮ

MM HALLI jameer
ಮರಿಯಮ್ಮನಹಳ್ಳಿಯ ಪಪಂ ಕಚೇರಿ ಆವರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ಜನರು ಮನವಿ ಸಲ್ಲಿಸಿದರು.
Published on

ಮರಿಯಮ್ಮನಹಳ್ಳಿ: ನೂತನ ವಿಜಯನಗರ ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡುವುದೇ ನನ್ನ ಉದ್ದೇಶ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಹಬೊಹಳ್ಳಿಗೆ ಹೋಗುವಾಗ ಮಾರ್ಗ ಮಧ್ಯೆ ಮರಿಯಮ್ಮನಹಳ್ಳಿ ಪಪಂ ಆವರಣದಲ್ಲಿ ಶನಿವಾರ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಸಂಚರಿಸಿ ಸಮಸ್ಯೆಗಳನ್ನು ಅರಿತು ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪಟ್ಟಣದಲ್ಲಿ ಕುಡಿವ ನೀರಿನ ಯೋಜನೆ, ಎನ್‌ಎಚ್-50ರಲ್ಲಿ ಡಣಾಪುರ ಬಳಿ ಇರುವ ಅಪೂರ್ಣಗೊಂಡಿರುವ ಸೇತುವೆ ಕಾಮಗಾರಿ ಪೂರ್ಣಗೊಳಿಸುವುದು, ಸಿಎಚ್‌ಸಿ ಆರಂಭ, ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಜಿಪಂ ಮಾಜಿ ಸದಸ್ಯ ಗೋವಿಂದರ ಪರಶುರಾಮ ನೇತೃತ್ವದಲ್ಲಿ ಸ್ಥಳೀಯರು ಮನವಿ ಸಲ್ಲಿಸಿದರು.

ಕೆಪಿಸಿಸಿ ಸದಸ್ಯ ಕುರಿ ಶಿವಮೂರ್ತಿ, ಎನ್.ಸತ್ಯನಾರಾಯಣ, ತಳವಾರ್ ಹುಲುಗಪ್ಪ, ಕೊಟಿಗಿ ಲೋಕೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net