ಕಾಂಗ್ರೆಸ್‌ಗೆ ಜನರಿಂದ ತಕ್ಕ ಪಾಠ - ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಸಂಜೀವ ರೆಡ್ಡಿ ಹೇಳಿಕೆ

MM HALLI 01
ಮರಿಯಮ್ಮನಹಳ್ಳಿ ಸಮೀಪದ 114 ಡಣಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಬಿಜೆಪಿ ಸಂಘಟನಾ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಸಂಜೀವ ರೆಡ್ಡಿ, ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ, ಪ್ರಮುಖರಾದ ಡಿ.ರಾಘವೇಂದ್ರ ಶೆಟ್ಟಿ, ವೀರೇಶ್ವರ ಸ್ವಾಮಿ, ಷಣ್ಮುಖ ಇತರರಿದ್ದರು.
Published on

ಮರಿಯಮ್ಮನಹಳ್ಳಿ: ಕಾಂಗ್ರೆಸ್ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಹೀಗಾಗಿ ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಸಂಜೀವ ರೆಡ್ಡಿ ಹೇಳಿದರು.

ಸಮೀಪದ 114 ಡಣಾಪುರ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಸಂಘಟನಾ ಸಭೆಯಲ್ಲಿ ಮಾತನಾಡಿದರು. ರಾಜ್ಯ ಸರ್ಕಾರ ಭಾಗ್ಯಗಳ ಹೆಸರಿನಲ್ಲಿ ಎಸ್ಸಿ, ಎಸ್ಟಿ ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ದಲಿತರಿಗೆ ಅನ್ಯಾಯ ಮಾಡಿದೆ. ಅಲ್ಲದೇ ಕಳೆದ ಎರಡು ವರ್ಷಗಳಿಂದ ಸುಳ್ಳು ಹೇಳಿಕೊಂಡು ಜನರಿಗೆ ಮಂಕುಬೂದಿ ಎರಚುತ್ತಿದೆ. ಜಿಪಂ, ತಾಪಂ ಚುನಾವಣೆಗಳು ಹತ್ತಿರ ಬರುತ್ತಿದ್ದು, ಕಾರ್ಯಕರ್ತರು ಉತ್ಸುಕತೆಯಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಬೇಕು ಎಂದರು.

ಹಬೊಹಳ್ಳಿ ಕ್ಷೇತ್ರದ ಪರಾಜಿತ ಅಭ್ಯರ್ಥಿ ಬಲ್ಲಾಹುಣಸಿ ರಾಮಣ್ಣ ಮಾತನಾಡಿ, ಕಾರ್ಯಕರ್ತರೆಲ್ಲ ಹಿಂದಿನ ಕಹಿಯನ್ನು ಮರೆತು ಮುಂಬರುವ ಚುನಾವಣೆಗಳನ್ನು ಎದುರಿಸಲು ಸಜ್ಜಾಗಬೇಕು. ಚುನಾವಣೆಗಳಲ್ಲಿ ಸೋಲು ಗೆಲುವು ಸಹಜ ಎಂದರು.

ಕಾರ್ಯಕರ್ತರು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಪ್ರಮುಖರಾದ ಮಜ್ಗಿ ನಾಗರಾಜ, ಗಂಡಿ ಬಸವರಾಜ, ಜೋಗಿ ಹನುಮಂತ, ಕೋಗಳಿ ಹನುಮಂತಪ್ಪ, ಎಚ್.ಬಿ.ಕೃಷ್ಣ, ಎಂ.ಭರತಕುಮಾರ, ದೇವೇಂದ್ರಪ್ಪ, ತಮ್ಮಜ್ಜ, ದುರುಗಪ್ಪ, ವೆಂಕಟೇಶ, ಈ.ಶೇಷಪ್ಪ, ಈ.ಶ್ರೀನಿವಾಸ, ಅಂಬರೀಷ, ಹನುಮನಾಯ್ಕ, ನಾಗರಾಜ, ನಾಗಪ್ಪ, ಹಳ್ಳಿ ನಿಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net