ಮರಿಯಮ್ಮನಹಳ್ಳಿಯಲ್ಲಿ ಜನರಿಗೆ ಉಪಟಳ ನೀಡುತ್ತಿದ್ದ 11 ಕೋತಿಗಳ ಸೆರೆ

09022020 MM Halli Monkey captivity
Published on

ಮರಿಯಮ್ಮನಹಳ್ಳಿ: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಉಪಟಳ ನೀಡುತ್ತಿದ್ದ ಕೋತಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.

ಹಲವು ದಿನಗಳಿಂದ ಕೋತಿಗಳು ಸಾರ್ವಜನಿಕರಿಗೆ ಕಿರಿಕಿರಿ ನೀಡುತ್ತಿದ್ದವು. ಅಲ್ಲದೇ ಮೂರನೇ ವಾರ್ಡ್ ಸರ್ಕಾರಿ ಆಸ್ಪತ್ರೆ ಬಳಿ ರಾಘವೇಂದ್ರ ಸ್ವಾಮಿ ಮಠಕ್ಕೆ ಹೋಗುವ ಭಕ್ತರ ಮೇಲೆ ದಾಳಿ ಮಾಡುತ್ತಿದ್ದವು. ಇದರಿಂದ ಬೇಸತ್ತ ಜನ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಸಾರ್ವಜನಿಕರ ಸಹಕಾರದಿಂದ ಅಧಿಕಾರಿಗಳು ಬೋನ್ ಅಳವಡಿಸಿ 11 ಕೋತಿಗಳನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಪಪಂ ಸದಸ್ಯ ನರಸಿಂಹ ಮೂರ್ತಿ, ಇಲಾಖೆ ನೌಕರ ಅನಿಲ್ ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net