ಜ.22ರಂದು ಮಾರುಕಟ್ಟೆಯಲ್ಲಿ ಧಾರ್ಮಿಕ ಕೈಂಕರ್ಯ: ಶ್ರೀರಾಮ ಭಕ್ತಮಂಡಳಿ ಕಾರ್ಯದರ್ಶಿ ಕಿರಣ್ ಮಾಹಿತಿ

Market Shri Ram Bhaktamandali Press Conference mandya
Published on

ಮಂಡ್ಯ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಯಲ್ಲಿ ಜ.22ರಂದು ವಿವಿಧ ಧಾರ್ಮಿಕ ಕೈಂಕರ್ಯ ಆಯೋಜಿಸಲಾಗಿದೆ. ಅಂದು ಇಡೀ ಮಾರುಕಟ್ಟೆಯಲ್ಲಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಗುವುದು ಎಂದು ಮಾರುಕಟ್ಟೆ ಶ್ರೀರಾಮ ಭಕ್ತಮಂಡಳಿ ಕಾರ್ಯದರ್ಶಿ ಕಿರಣ್ ಹೇಳಿದರು.

ಅಂದು ಬೆಳಗ್ಗೆ 8 ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಪೂಜಾ ಕುಣಿತ, ವೀರಗಾಸೆ, ಹನುಮಾನ್ ವಿಗ್ರಹ ಮೂರ್ತಿ, ಶ್ರೀರಾಮ ವಿಗ್ರಹಮೂರ್ತಿ ಮಂಗಳವಾದ್ಯದ ಮೆರವಣಿಗೆ ನಡೆಯಲಿದೆ. ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಳಮ್ಮ ಮತ್ತು ಬಿಸಿಲು ಮಾರಮ್ಮ ದೇವರ ಉತ್ಸವ ಆಯೋಜಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರದ ಎರಡು ಮಾರುಕಟ್ಟೆಲ್ಲಿರುವ 500ಕ್ಕೂ ಹೆಚ್ಚು ವ್ಯಾಪಾರಸ್ಥರು ಬೃಹತ್ ಮೆರವಣಿಗೆ ನಡೆಯಲಿದೆ. ಈ ವೇಳೆ ಜಾನಪದ ಕಲಾತಂಡಗಳು ಭಾಗವಹಿಸಲಿವೆ. 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ನಗರದ ಹಳೇ ತಾಲೂಕು ಕಚೇರಿ ಆವರಣದಲ್ಲಿರುವ ರಾಮಮಂದಿರದಲ್ಲಿ ಪೂಜಾ ಹೋಮ ನಡೆಯಲಿದೆ. ಬಳಿಕ ಪ್ರಸಾದ ವಿನಿಯೋಗ ನಡೆಯಲಿದೆ. ನಗರಸಭೆ ಸದಸ್ಯರು, ಶಾಸಕರು ಸೇರಿದಂತೆ ಎಲ್ಲ ಪಕ್ಷದವರನ್ನು ಆಹ್ವಾನಿಸಲಾಗಿದೆ ಎಂದು ವಿವರಿಸಿದರು.

ಭಕ್ತ ಮಂಡಳಿ ಅಧ್ಯಕ್ಷ ಶ್ರೀನಿವಾಸ್, ಪದಾಧಿಕಾರಿಗಳಾದ ಯೋಗಾನಂದ, ರಾಜು, ಶ್ರೀನಿವಾಸ್, ಗಿರೀಶ್, ಮಹಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net