

ಬಳ್ಳಾರಿ: ಮಹಾನಗರ ಪಾಲಿಕೆ ಕಚೇರಿಯಲ್ಲೇ ಮದುವೆ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಮೂಲಕ ಇಲ್ಲಿನ ಮೇಯರ್ ಸರ್ಕಾರಿ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಳ್ಳಾರಿ ಪಾಲಿಕೆ ಮೇಯರ್ ರಾಜೇಶ್ವರಿ ಸುಬ್ಬರಾಯಡು ಅವರ ಮದುವೆ ವಾರ್ಷಿಕೋತ್ಸವವನ್ನು ಪಾಲಿಕೆ ಕಚೇರಿಯಲ್ಲೇ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಲ್ಲದೇ, ಫೋಟೋಗಳಿಗೂ ಪೋಸ್ ನೀಡಿದ್ದಾರೆ.
ಮಹಾನಗರ ಪಾಲಿಕೆ ಮೇಯರ್ ಅವರಿಂದಲೇ ಸರ್ಕಾರಿ ಕಚೇರಿ ದುರ್ಬಳಕೆಯಾಗಿದ್ದು, ಮೇಯರ್ ರಾಜೇಶ್ವರಿ ಹಾಗೂ ಪತಿ ಸುಬ್ಬಾರಾಯಡು ಅವರ ವಾರ್ಷಿಕೋತ್ಸವ ಆಚರಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರೂ ಪಾಲ್ಗೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)