

ಸವದತ್ತಿ:ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಪತಿ ಮಾರಕಾಸದಿಂದ ಹಲ್ಲೆಗೈದ ಘಟನೆ ಮಂಗಳವಾರ ಸವದತ್ತಿ ನ್ಯಾಯಾಲಯದಲ್ಲಿ ನಡೆದಿದೆ. ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್‌ಗೆ ಬಂದಾಗ ಈ ಘಟನೆ ನಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಮಹಿಳೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.