ಮದುವೆ ಆಗಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ

Crime Logo
Published on

ರಾಣೆಬೆನ್ನೂರ: ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಮದುವೆ ಚಿಂತೆ ಮಾಡುತ್ತ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಬಸವೇಶ್ವರ ನಗರದಲ್ಲಿ ಶುಕ್ರವಾರ ನಡೆದಿದೆ.
ಬಸವರಾಜ ಮಹಾಭಲೇಶ್ವರ ಬೇಟಗೇರಿ (32) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತ ಮದ್ಯದ ಚಟಕ್ಕೆ ಅಂಟಿಕೊಂಡಿದ್ದ. ಅಲ್ಲದೆ ಮದುವೆ ಕೂಡ ಆಗಿಲ್ಲ ಎನ್ನುವ ಕಾರಣಕ್ಕೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net