ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ

ylp-nagaraj-gaonkar
Published on

ಯಲ್ಲಾಪುರ: ಹವ್ಯಕ ಸಮುದಾಯದ ಯುವಕರಿಗೆ ಮದುವೆಗೆ ಕನ್ಯೆ ಸಿಗುವುದು ತುಂಬಾ ಕಷ್ಟವಾಗಿದೆ. ಕೃಷಿ ಮಾಡಿಕೊಂಡಿರುವ ಯುವಕರಿಗಂತೂ ಹೆಣ್ಣು ಕೊಡುವವರೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಅದೇ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನಲ್ಲಿ ನಡೆದಿದೆ.

  ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ಬುಧವಾರ ನಡೆದಿದೆ ನಡೆದಿದೆ.

   ಕಿರಗಾರಿಮನೆಯ ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿ. ಕೃಷಿ ಮಾಡಿಕೊಂಡಿದ್ದ ಆತ, ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ನೊಂದಿದ್ದ ಎನ್ನಲಾಗಿದೆ. ಮನೆಯ ಸಮೀಪದ ಗುಡ್ಡದಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net