

ರಾಣೆಬೆನ್ನೂರ: ಮದುವೆಯಾಗಿ 15 ವರ್ಷವಾದರೂ ಮಕ್ಕಳಾಗಲಿಲ್ಲವೆಂದು ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ಕವಿತಾ ಚಂದ್ರಯ್ಯ ರಾಚಪ್ಪನವರ (38) ಮೃತ ಮಹಿಳೆ.
ಇವರು ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ಎನ್ನುವ ಕಾರಣಕ್ಕೆ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.