

ರಾಣೆಬೆನ್ನೂರ: ಮಾರುತಿ ಇಕೋ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಕವಲೆತ್ತು ಗ್ರಾಮದ ಬಳಿ ಸೋಮವಾರ ನಡೆದಿದೆ.
ತಾಲೂಕಿನ ಎಣ್ಣಿಹೊಸಳ್ಳಿ ಗ್ರಾಮದ ಕೃಷ್ಣಪ್ಪ ರಾಮಪ್ಪ ಗಿರಿರೆಡ್ಡೇರ (55) ಮೃತ ವ್ಯಕ್ತಿ.
ಈತ ಬೈಕ್ ಮೇಲೆ ತೆರಳುತ್ತಿದ್ದ ಸಮಯದಲ್ಲಿ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣಪ್ಪನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.