ಮಾಸ್ಕ್ ಧರಿಸದವರಿಗೆ ಪಾಲಿಕೆಯಿಂದ ದಂಡ

Mask 1 May 20
Published on

ಬೆಳಗಾವಿ: ಕರೊನಾ ಹರಡುವಿಕೆ ತಡೆಗಟ್ಟಲು ನಗರದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದ ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆಯು ಇದುವರೆಗೆ ಒಟ್ಟಾರೆ 1,05,190 ರೂ. ದಂಡ ವಿಧಿಸಿದೆ.

ಲಾಕ್‌ಡೌನ್ ನಿಯಮ ಉಲ್ಲಂಘನೆ ಕಂಡುಬಂದರೆ ಸ್ಥಳದಲ್ಲೇ ದಂಡ ವಿಧಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net