ಮಾಸ್ಕ್ ಧರಿಸುವುದು ಕಡ್ಡಾಯವಲ್ಲ; ಆರೋಗ್ಯವಂತರು ಧರಿಸುವ ಅಗತ್ಯವಿಲ್ಲ ಎಂದ ಆರೋಗ್ಯ ಇಲಾಖೆ

Coronaviruss
Published on

ಬೆಂಗಳೂರು: ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ನಿಯಮವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಸ್ಪಷ್ಟಪಡಿಸಿದ್ದಾರೆ.

ಕರೊನಾ ವೈರಸ್ ಸೋಂಕು ಹರಡುವ ಭೀತಿಯಿಂದಾಗಿ ಪೊಲೀಸರು, ವ್ಯಾಪಾರಿ ಮಳಿಗೆಗಳು, ವಾಣಿಜ್ಯ ಸಂಸ್ಥೆಗಳ ಆಡಳಿತ ವರ್ಗ ಮಾಸ್ಕ್ ಧರಿಸುವಂತೆ ಒತ್ತಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಆದರೆ, ಆರೋಗ್ಯವಂತರು ಮಾಸ್ಕ್ ಧರಿಸುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

ಶೀತ, ಕೆಮ್ಮು, ಜ್ವರ ಅಥವಾ ಉಸಿರಾಟದ ಸಮಸ್ಯೆಯಂತಹ ರೋಗ ಲಕ್ಷಣವಿದ್ದವರು ಮೂರು ಪದರಗಳ ಸರ್ಜಿಕಲ್ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net