ಎಕರೆಗೆ 25 ಸಾವಿರ ರೂ.ಪರಿಹಾರ ಕೊಡಿ

Published on

ಮಸ್ಕಿ: ರಾಯಚೂರು ಜಿಲ್ಲಾದ್ಯಂತ ಅಪಾರ ಪ್ರಮಾಣದಲ್ಲಿ ಸುರಿದ ಮಳೆಗೆ ಬೆಳೆ ಹಾನಿಯಾಗಿದ್ದು, ಸರ್ಕಾರ ಕೂಡಲೇ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಗ್ರೇಡ್ 2 ತಹಸೀಲ್ದಾರ್ ಷಣ್ಮಖಪ್ಪಗೆ ಕರ್ನಾಟಕ ಜಾಗೃತ ರೈತ ಸಂಘದ ಪ್ರಮುಖರು ಮಂಗಳವಾರ ಮನವಿ ಸಲ್ಲಿಸಿದರು.

ಅತಿವೃಷ್ಟಿಗೆ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ ಇದುವರೆಗೂ ರೈತರಿಗೆ ಪರಿಹಾರ ಸಿಕ್ಕಿಲ್ಲ. ಹೀಗಾಗಿ ರೈತರಿಗೆ ಸಂಕಷ್ಟ ಎದುರಾಗಿದೆ. ಕೂಡಲೇ ರೈತರಿಗೆ ಎಕರೆ ಭೂಮಿಗೆ 25 ಸಾವಿರ ರೂ. ಪರಿಹಾರ ನೀಡಬೇಕು. ಸಣ್ಣ ಹಿಡುವಳಿದಾರರು ಪಡೆದ ಬೆಳೆ ಸಾಲ ಮನ್ನಾ ಮಾಡುವುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net