ಸುಪ್ರೀಂ ಕೋರ್ಟ್ ತೀರ್ಪು ಜಾರಿಗೊಳಿಸಿ; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

24082022 maski protest
Published on

ಮಸ್ಕಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಯಿಟಿ ಸೌಲಭ್ಯಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸುವುದರೊಂದಿಗೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಭ್ರಮರಾಂಬ ದೇವಸ್ಥಾನದ ಮುಂಭಾಗದಿಂದ ತಹಸಿಲ್ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ನಂತರ ತಹಸೀಲ್ದಾರ್ ಆರ್.ಕವಿತಾಗೆ ಮನವಿ ಸಲ್ಲಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದು 46 ವರ್ಷಗಳು ಕಳೆದಿವೆ. ಆದರೂ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗೌರವಧನದ ಹೆಸರಿನಲ್ಲಿ ಕೆಲಸದ ಭದ್ರತೆಯಿಲ್ಲದೆ, ಕನಿಷ್ಠ ವೇತನವಿಲ್ಲದೆ ಕೆಲಸ ಮಾಡುವಂತಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳಾದ ಪಿಂಚಣಿ, ಭವಿಷ್ಯನಿಧಿ, ಗ್ರಾಚ್ಯುಯಿಟಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಸರ್ಕಾರಗಳು ಸಮಸ್ಯೆ ಬಗೆಹರಿಸುವತ್ತ ಗಮನ ಹರಿಸದೆ ಇರುವುದು ನೋವಿನ ಸಂಗತಿಯಾಗಿದೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net