ಹಿಂದುಳಿದ ವರ್ಗಗಳ ಕಾರ್ಯಕ್ರಮ ಬುಧವಾರ

0304023 maski shivaraj patil
Published on

ಮಸ್ಕಿ: ಪಟ್ಟಣದಲ್ಲಿ ಏ.5 ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ ಪಾಟೀಲ್ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಕ್ಷದ ಆದೇಶದಂತೆ ಬಿಜೆಪಿ ಕಚೇರಿಯಲ್ಲಿ ಸಮಾವೇಶ ಏರ್ಪಡಿಸಲಾಗಿದ್ದು, ಸಚಿವ ಬೈರತಿ ಬಸವರಾಜ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಕೆ.ಕರಿಯಪ್ಪ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಪ್ರಮುಖರಾದ ಬಸವರಾಜ ಡೊಣಮರಡಿ, ಶರಣಯ್ಯಸ್ವಾಮಿ ಸೊಪ್ಪಿಮಠ, ಬಸವರಾಜ ಕಡಬೂರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net