

ರಾಯಚೂರು: ಉಪ ಚುನಾವಣೆ ನಡೆಯುತ್ತಿರುವ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರಿಗೆ ಕೋವಿಡ್19 ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ಪ್ರತಾಪಗೌಡ ಹಾಕಿದ್ದಾರೆ. ಚುನಾವಣೆ ಪ್ರಚಾರದ ಕಾವು ಹೆಚ್ಚುತ್ತಿರುವ ಸಂಧರ್ಭದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಂಕು ತಗುಲಿದೆ. ಕೆಲವು ದಿನಗಳ ಹಿಂದೆಯಷ್ಟೇ ಪ್ರತಾಪಗೌಡ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು.
ನನಗೆ ಕೊವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ ಇದ್ದೇನೆ. ಯಾರೂ ಆತಂಕ ಪಡಬೇಕಾಗಿಲ್ಲ. ಶೀಘ್ರ ಗುಣಮುಖನಾಗಿ ಬರುತ್ತೇನೆ. 17 ರಂದು ಮತದಾನ ಇದ್ದು ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡುತ್ತಾರೆ. ಅವರನ್ನು ನಾನೇ ಎಂದು ಪರಿಭಾವಿಸಿ ಆಶೀರ್ವದಿಸಲು ಮತ್ತು ಕಮಲದ ಗುರುತಿಗೆ ಮತ ನೀಡಲು ಕೋರುತ್ತೇನೆ. ನಿಮ್ಮ ಮತ್ತು ನಿಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಲು ವಿನಂತಿಸುತ್ತೇನೆ ಎಂದು ಸಂದೇಶ ರವಾನಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್‌ವೈ ಆದಿಯಾಗಿ ಸಚಿವರು, ಬಿಜೆಪಿ ಮುಖಂಡರು ಪ್ರತಾಪಗೌಡ ಸಂಪರ್ಕಕ್ಕೆ ಬಂದಿದ್ದರು.