ಪ್ರತಾಪಗೌಡ ಪಾಟೀಲ ಬೆಂಬಲಿಗರಲ್ಲಿ ನಿರಾಸೆ

240522 Maski Pratapgouda patil Social Media Post
ಸಾಮಾಜಿಕ ಜಾಲತಾಣ ಮೂಲಕ ಮಸ್ಕಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಬೆಂಬಲಿಗರಲ್ಲಿ ಅಸಮಾಧಾನ ಮಾಡಿಕೊಳ್ಳದಂತೆ ಮಾಡಿಕೊಂಡಿರುವ ಮನವಿ.
Published on

ಮಸ್ಕಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಕ್ಕಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ಪ್ರತಾಪಗೌಡ ಪಾಟೀಲ ಕೂಡ ಒಬ್ಬರಾಗಿದ್ದಾರೆ. ವಿಧಾನಸಭೆ ಉಪ ಚುನಾವಣೆಯಲ್ಲಿ ಸೋತಿರುವ ಪ್ರತಾಪಗೌಡ ಪಾಟೀಲಗೆ ಎಂಎಲ್ಸಿ ಮಾಡುವ ಬೆಂಬಲಿಗರ ನಿರೀಕ್ಷೆ ಹುಸಿಯಾಗಿದೆ.

ಉಪ ಚುನಾವಣೆಯಲ್ಲಿ ಸೋತ ಬಳಿಕ ಪ್ರತಾಪಗೌಡ ಪಾಟೀಲಗೆ ಸರ್ಕಾರದಲ್ಲಿ ಉನ್ನತ ಸ್ಥಾನ ನೀಡುವ ಭರವಸೆಯನ್ನು ಪಕ್ಷದ ಪ್ರಮುಖರು ನೀಡಿದ್ದರು. ಇದರಿಂದಾಗಿ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲಗೆ ಟಿಕೆಟ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಪಕ್ಷ ಅನ್ಯರಿಗೆ ಮಣೆ ಹಾಕಿದೆ. ಈ ಕುರಿತು ಬೆಂಬಲಿಗರು ಅಸಮಾಧಾನ ಹೊರಹಾಕುತ್ತಿದ್ದಂತೆ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಪುತ್ರ ಪುರಸಭೆ ಸದಸ್ಯ ಚೇತನ್ ಪಾಟೀಲ ಮುಖಾಂತರ ಕಾರ್ಯಕರ್ತರಲ್ಲಿ ಅಸಮಾಧಾನಗೊಳ್ಳದಂತೆ ಮನವಿ ಮಾಡಿದ್ದಾರೆ. ನಾನು ಪಕ್ಷದ ನಿಷ್ಠಾವಂತ ಕಾರ‌್ಯಕರ್ತನಾಗಿದ್ದು, ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ನಾನು ಮೊದಲಿಗನಾಗಿದ್ದೇನೆ. ಪಕ್ಷದ ತಿರ್ಮಾನಕ್ಕೆ ಎಲ್ಲರೂ ಬದ್ಧರಾಗಿರೋಣ. ಮುಂದಿನ ದಿನಗಳಲ್ಲಿ ನಮಗೆ ಸೂಕ್ತ ಸ್ಥಾನಮಾನ ಸಿಗುತ್ತೆ ಎಂಬ ಭರವಸೆಯೊಂದಿಗೆ ಎಲ್ಲರೂ ಪಕ್ಷಕ್ಕಾಗಿ ದುಡಿಯೋಣ, ಯಾರೂ ಪಕ್ಷದ ವಿರುದ್ಧ ಹೇಳಿಕೆ ಕೊಡಬಾರದು ಎಂದು ಸಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net