ಬಿಜೆಪಿಯ ಜನೋಪಯೋಗಿ ಕೆಲಸಗಳನ್ನು ಜನರಿಗೆ ತಲುಪಿಸಿ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸಲಹೆ

101122 Maski BJP Meeting
ಮಸ್ಕಿಯಲ್ಲಿ ಆಯೋಜಿಸಿದ್ದ ಮಂಡಲ ಕಾರ್ಯಕಾರಿ ಹಾಗೂ ವಿವಿಧ ಮೋರ್ಚಾದ ಸಭೆಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿದರು.
Published on

ಮಸ್ಕಿ: ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸಬೇಕು ಎಂದು ಬಿಜೆಪಿ ಬಳ್ಳಾರಿ ವಿಭಾಗದ ಸಹ ಪ್ರಭಾರ ಚಂದ್ರಶೇಖರ ಹಲಗೇರಿ ಸಲಹೆ ನೀಡಿದರು.

ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಮಂಡಲ ಕಾರ್ಯಕಾರಿ ಹಾಗೂ ವಿವಿಧ ಮೋರ್ಚಾಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸನಿಹದಲ್ಲಿವೆ. ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ಕೊಡುವ ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು. ಕಳೆದು ಹೋದ ಮಸ್ಕಿ ಕ್ಷೇತ್ರವನ್ನು ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ತೆಕ್ಕೆಗೆ ತರಬೇಕು ಎಂದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಕಾರ್ಯಕರ್ತರು ಈಗಿನಿಂದಲೇ ಚುನಾವಣೆಗೆ ಸಿದ್ಧ್ದತೆ ಮಾಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಜನೋಪಯೋಗಿ ಕೆಲಸಗಳನ್ನು ಮಾಡಿದ್ದು ಅವುಗಳನ್ನು ಜನರಿಗೆ ತಲುಪಿಸಿದಾಗ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ್, ಎಸ್.ಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಶರಣಬಸವ ವಕೀಲ, ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ದೇಶಪಾಂಡೆ, ಶರಣಪ್ಪಗೌಡ ನಕ್ಕುಂದಿ, ಶಾರದ ರಾಠೋಡ್, ಶರಣಯ್ಯ ಸೊಪ್ಪಿಮಠ, ಮಲ್ಲು ಯಾದವ, ಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ ಯಂಬಲದ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net