ಬುದ್ದಿನ್ನಿಗೆ ಪ್ರೌಢಶಾಲೆ ಮಂಜೂರಿಗೆ ಒತ್ತಾಯಿಸಿ ಹತ್ತಾರು ಗ್ರಾಮಸ್ಥರಿಂದ ಪ್ರತಿಭಟನೆ

Buddinni Villagers Protest
ಬುದ್ದಿನ್ನಿ (ಎಸ್) ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡುವಂತೆ ಒತ್ತಾಯಿಸಿ ಮಸ್ಕಿಯಲ್ಲಿ ನಾನಾ ಗ್ರಾಮಗಳ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
Published on

ಮಸ್ಕಿ: ಬುದ್ದಿನ್ನಿ (ಎಸ್) ಗ್ರಾಮಕ್ಕೆ ಪ್ರೌಢಶಾಲೆ ಮುಂಜೂರು ಮಾಡಬೇಕು ಎಂದು ಆಗ್ರಹಿಸಿ ಹತ್ತಕ್ಕೂ ಹೆಚ್ಚು ಗ್ರಾಮಗಳ ಗ್ರಾಮಸ್ಥರು ಶುಕ್ರವಾರ ಪಟ್ಟಣದಲ್ಲಿ ಜಾಥಾ ನಡೆಸಿ, ಹಳೆಯ ಬಸ್‌ನಿಲ್ದಾಣದ ಡಾ.ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಪ್ರೌಢಶಾಲೆಗಾಗಿ ಕಟ್ಟಡ ನಿರ್ಮಾಣ ಮಾಡಿ ಎರಡು ವರ್ಷವಾಗಿದೆ. ಇದುವರೆಗೂ ಮುಂಜೂರಾತಿ ನೀಡದ ಕಾರಣ ನೂರಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತಗೊಂಡಿದ್ದಾರೆ ಎಂದು ಹೋರಾಟ ಸಮಿತಿ ಮುಖಂಡ ಬಸವರಾಜಪ್ಪಗೌಡ ಹಾರ್ವಾಪೂರ ಕಳವಳ ವ್ಯಕ್ತಪಡಿಸಿದರು. ಪ್ರೌಢಶಾಲೆ ಮುಂಜೂರು ಮಾಡುವಂತೆ ಎರಡು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಈ ಕಾರಣಕ್ಕೆ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲಾಗಿತ್ತು. ಸಂಸದ ಕರಡಿ ಸಂಗಣ್ಣ, ಶಾಸಕ ಬಸನಗೌಡ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲರು ಶಾಲೆ ಆರಂಭಿಸುವ ಬಗ್ಗೆ ಪತ್ರ ಕೊಟ್ಟಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು. ಬುದ್ದಿನ್ನಿ, ಹೂವಿನಭಾವಿ, ಮುದಬಾಳ, ಹರ್ವಾಪೂರ, ತುಪ್ಪದೂರು, ಕಾಟಗಲ್, ಸಾನಬಾಳ ಗ್ರಾಮಸ್ಥರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net