ಪೌರ ಕಾರ್ಮಿಕರಿಗೆ ಸರ್ಕಾರದಿಂದ ಅನೇಕ ಸೌಲಭ್ಯ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿಕೆ

230922 Maski Civic Workers Day Programme
ಮಸ್ಕಿಯ ಭ್ರಮರಾಂಬ ದೇವಸ್ಥಾನದಲ್ಲಿ ಪೌರ ಕಾರ್ಮಿಕರ ದಿನದ ಕಾರ್ಯಕ್ರಮವನ್ನು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಶುಕ್ರವಾರ ಉದ್ಘಾಟಿಸಿದರು.
Published on

ಮಸ್ಕಿ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 11,300 ಕಾರ್ಮಿಕರನ್ನು ಕಾಯಂಗೊಳಿಸುವ ಮೂಲಕ ರಾಜ್ಯ ಸರ್ಕಾರ ಪೌರ ಕಾರ್ಮಿಕರ ಹಿತ ಕಾಪಾಡಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಸ್ಥಾನದಲ್ಲಿ ಕರ್ನಾಟಕ ಪೌರ ನೌಕರರ ಸಂಘ ಹಾಗೂ ಪುರಸಭೆಯಿಂದ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು. ಸ್ವಚ್ಛತೆಗಾಗಿ ಹಗಲು-ರಾತ್ರಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅನೇಕ ಸೌಲಭ್ಯ ಕಲ್ಪಿಸಿದ್ದು, ಅದರ ಸದುಪಯೋಗವನ್ನು ಪೌರಕಾರ್ಮಿಕರು ಪಡೆದುಕೊಳ್ಳಬೇಕು. ಮಸ್ಕಿ ಪುರಸಭೆ ಸ್ವಚ್ಛತೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಅದಕ್ಕೆ ಇಲ್ಲಿಯ ಪೌರ ಕಾರ್ಮಿಕರ ದುಡಿಮೆ ಕಾರಣ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net