ಶಾಸ್ತ್ರೀಯ ಭಾಷೆ ಸ್ಥಾನಮಾನ ಸದುಪಯೋಗವಾಗಲಿ

011122 Maski Rajyothsava
ಮಸ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಅವರ ಪಾಲಕರನ್ನು ತಾಲೂಕು ಆಡಳಿತದಿಂದ ಸತ್ಕರಿಸಲಾಯಿತು.
Published on

ಮಸ್ಕಿ: ಕನ್ನಡ ನಾಡಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪುರಾತನ ಭಾಷೆಗೆ ಅನ್ಯಾಯವಾದಾಗ ಅದರ ಪರ ನಿಲ್ಲುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕನ್ನಡ ಭಾಷೆಗೆ ಸಿಕ್ಕಿರುವ ಶಾಸ್ತ್ರೀಯ ಭಾಷೆ ಸ್ಥಾನಮಾನದ ಸದುಪಯೋಗ ಆಗಬೇಕಿದೆ ಎಂದರು. ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ ಕವಿತಾ ಆರ್., ಅನೇಕ ದಾರ್ಶನಿಕರು ಪ್ರಪಂಚಕ್ಕೆ ವಚನ, ದಾಸ ಸಾಹಿತ್ಯ ಪರಿಚಯಿಸಿದ್ದು ಕನ್ನಡ ನಾಡಿನ ಹಿರಿಮೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net