

ಮಸ್ಕಿ: ಪ್ರಸ್ತುತ ಮಹಿಳೆಯರು ಎಲ್ಲ ರಂಗಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕೆಲಸ ನಿರ್ವಹಿಸಲು ಸದೃಢರಾಗಿದ್ದು, ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಪಟ್ಟಣದ ಭ್ರಮರಾಂಬಾ ಕಲ್ಯಾಣ ಮಂಟಪದಲ್ಲಿ ಮಹಿಳಾ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತಂಜಲಿ ಮಹಿಳಾ ಸಮಿತಿ ಅಧ್ಯಕ್ಷೆ ಚಂದ್ರಕಲಾ ದೇಶಮುಖ ಮಾತನಾಡಿ, ಮಹಿಳೆಯರು ಶಿಕ್ಷಣ ಪಡೆದು ಉದ್ಯೋಗ ಮಾಡುತ್ತ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಇನ್ನಷ್ಟು ಪ್ರಬುದ್ಧತೆ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದರು.
ಡಾ.ವಿದ್ಯಾಶ್ರೀ ಅಂಗಡಿ ಮಾತನಾಡಿ, ಮಹಿಳೆಯರಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಆಗಾಗ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು ಎಂದು ಸಲಹೆ ನೀಡಿದರು. ಹಿರಿಯ ವೈದ್ಯರಾದ ಶಿವಶರಣಪ್ಪ ಇತ್ಲಿ, ವಿನೋದ ಅಂಗಡಿ, ಪುಷ್ಪಾ ಬಿಜ್ಜಳ, ವಿದ್ಯಾವತಿ ವನಕಿ, ಅರ್ಚನಾ ಹಾಗೂ ಸುವರ್ಣ ಬ್ಯಾಳಿ, ಕೆ.ರೋಹಿಣಿ, ಸಾವಿತ್ರಿ ಮೂಲಿಮನಿ, ಲತಾ ಮಸ್ಕಿ ಇತರರಿದ್ದರು.