ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳ ಅಗತ್ಯ; ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿಕೆ

14022022 Maski school bulding start
Published on


ವೀರಶೈವ ವಿದ್ಯಾವರ್ಧಕ ಸಂಘದ ಶಾಲೆ ಕಟ್ಟಡಕ್ಕೆ ಭೂಮಿ ಪೂಜೆ

ಮಸ್ಕಿ: ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಕಟ್ಟಡಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಲಾಯಿತು. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿ, ಪಟ್ಟಣದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಉತ್ತಮ ಶಿಕ್ಷಣ ನೀಡುವ ಸಂಸ್ಥೆಗಳು ಅಗತ್ಯವಾಗಿದೆ. ಶಾರದಾ ಇಂಗ್ಲಿಷ್ ಮಾಧ್ಯಮ ಶಾಲೆ 10 ವರ್ಷಗಳಿಂದ ಉತ್ತಮ ಶಿಕ್ಷಣ ನೀಡುತ್ತಿದೆ ಎಂದರು.

ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಪ್ರಮುಖರಾದ ಅಂದಾನಪ್ಪ ಗುಂಡಳ್ಳಿ, ಮಹಾದೇವಪ್ಪಗೌಡ ಪಾಟೀಲ, ಡಾ.ಬಿ.ಎಚ್.ದಿವಟರ್, ಮಲ್ಲಪ್ಪ ಕುಡತಿನಿ, ಸಿದ್ದಲಿಂಗಯ್ಯ ಗಚ್ಚಿನಮಠ, ಷಡಕ್ಷರಪ್ಪ ಬಾಳೆಕಾಯಿ, ಅಪ್ಪಾಜಿಗೌಡ ಪಾಟೀಲ, ವೀರೇಶಪ್ಪ ಯಂಬಲದ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಪ್ರತಿನಿಧಿ ಶಿವಕುಮಾರ್ ಎನ್, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ನಾಯಿನೆಗಲಿ, ಕಾರ್ಯದರ್ಶಿ ಸಿದ್ಧರಾಮಯ್ಯ ಗಡ್ಡಿಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net