ಹಾಸ್ಟೆಲ್ ಮಂಜೂರಾತಿಗೆ ಉನ್ನತ ಶಿಕ್ಷಣ ಸಚಿವರಲ್ಲಿ ಮನವಿ

Pratapagouda patel
ಪ್ರತಾಪಗೌಡ ಪಾಟೀಲ
Published on

ಮಸ್ಕಿ: ಪಟ್ಟಣದಲ್ಲಿ ಪ್ರಸಕ್ತ ವರ್ಷದಿಂದ ಆರಂಭವಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮಂಜೂರು ಮಾಡುವಂತೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ತಾಲೂಕಿನ ಗ್ರಾಮೀಣ ವಿದ್ಯಾರ್ಥಿಗಳು ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದು, ಪ್ರತಿದಿನ ನಿಗದಿತ ಸಮಯಕ್ಕೆ ಕಾಲೇಜಿಗೆ ಬರಲು ಸಾಧ್ಯವಾಗುವುದಿಲ್ಲ. ಪಟ್ಟಣದಿಂದ 3 ಕೀ.ಮೀ ಅಂತರದಲ್ಲಿ ಕಾಲೇಜು ಇದ್ದು, ನಿತ್ಯ ಹೋಗಿ ಬರಲು ಕಷ್ಟವಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ನಾನು ಶಾಸಕನಾಗಿದ್ದಾಗ ವಿದ್ಯಾರ್ಥಿಗಳ ಬೇಡಿಕೆ ಗಮನದಲ್ಲಿಟ್ಟುಕೊಂಡು ಪಟ್ಟಣದಲ್ಲಿ ಸರ್ಕಾರಿ ಜಾಗದ ಕೊರತೆ ಕಾರಣ ನಾನೇ ನನ್ನ 5 ಎಕರೆ ಭೂಮಿಯನ್ನು ಪಾಲಿಟೆಕ್ನಿಕ್ ಕಾಲೇಜು ಆರಂಭಿಸಲು ದಾನ ನೀಡಿದ್ದೇನೆ. ಕಟ್ಟಡ ಪೂರ್ಣಗೊಂಡಿದ್ದು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಿಸಿ ಅನುಕೂಲ ಕಲ್ಪಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net