ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕಿ : ಪಿಎಸ್‌ಐ ಸಣ್ಣ ವೀರೇಶ

22012020 Maski PSI Meeting
Published on

ಮಸ್ಕಿ: ಅಪಘಾತಗಳನ್ನು ತಡೆಗಟ್ಟಲು ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ಗಳನ್ನು ಧರಿಸಿಕೊಳ್ಳಬೇಕು. ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಹಾಕುವಂತೆ ಪಿಎಸ್‌ಐ ಸಣ್ಣ ವೀರೇಶ ಸೂಚಿಸಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೆಟ್ರೋಲ್ ಬಂಕ್ ಹಾಗೂ ವಾಹನ, ಬಿಡಿಭಾಗಗಳ ಮಾರಾಟಗಾರರ ಸಭೆಯಲ್ಲಿ ಮಾತನಾಡಿದರು. ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ತಡೆಯುವ ಜವಾಬ್ದಾರಿ ನಮ್ಮ ಮೇಲಿದೆ. ಚಾಲಕರು ರಸ್ತೆ ಸುರಕ್ಷಾ ಕ್ರಮಗಳನ್ನು ಅನುಸರಿಸಬೇಕು. ವಾಹನಗಳ ಶೋರೂಂಗಳಲ್ಲಿ ಹೊಸ ವಾಹನಗಳನ್ನು ಮಾರಾಟ ಮಾಡುವ ವೇಳೆ ಮಾಲೀಕರು ಗ್ರಾಹಕರಿಗೆ ಹೆಲ್ಮೆಟ್‌ನ್ನು ಕಡ್ಡಾಯವಾಗಿ ನೀಡಬೇಕು ಎಂದು ತಿಳಿಸಿದರು.

ಪಟ್ಟಣದ ಪೆಟ್ರೋಲ್ ಬಂಕ್ ಮಾಲೀಕ ಪ್ರಕಾಶ ಧಾರಿವಾಲ ಹಾಗೂ ವಾಹನ ಮಾರಾಟಗಾರರಾದ ಕಮತರ, ಶಿವರಾಜ ಬಾಳೆಕಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net