ನಿರ್ಭೀತಿಯಿಂದ ಹಕ್ಕು ಚಲಾಯಿಸಿ

22-msk-1
Published on

ಮಸ್ಕಿ: ಸದೃಡ ಭಾರತ ನಿರ್ಮಾಣಕ್ಕಾಗಿ ಮತದಾರರು ತಪ್ಪದೆ ಮತ ಚಲಾಯಿಸಬೇಕು ಎಂದು ಎಆರ್‌ಓ ಜಗದೀಶ ಗಂಗಣ್ಣನವರ್ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿ ಮತ್ತು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಅಭಿನಂದನ್ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ಸ್ವಚ್ಛತೆಯೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ನಿರ್ಭೀತಿಯಿಂದ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಬೇಕು ಎಂದು ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net