ಸಮಾಜ ಅಭಿವೃದ್ಧಿಗೆ ಪತ್ರಕರ್ತರೊಂದಿಗೆ ಕೈಜೋಡಿಸಿ; ಶಾಸಕ ಬಸನಗೌಡ ತುರ್ವಿಹಾಳ ಸಲಹೆ

Maski patrika dina
ಮಸ್ಕಿಯ ಭ್ರಮರಾಂಬ ದೇವಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳರನ್ನು ಪತ್ರಕರ್ತರ ಸಂಘದಿಂದ ಸನ್ಮಾನಿಸಲಾಯಿತು. ಶ್ರೀ ವರರುದ್ರಮುನಿ ಶಿವಾಚಾರ್ಯರು, ಹಿರಿಯ ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಮಲ್ಲಿಕಾರ್ಜುನ ಯದ್ದಲದಿನ್ನಿ, ತಹಸೀಲ್ದಾರ್ ಅರಮನೆ ಸುಧಾ, ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ ಇದ್ದರು.
Published on

ಮಸ್ಕಿ: ಪತ್ರಕರ್ತರು ಸಮಾಜ ಅಭಿವೃದ್ಧಿಗೆ ಪ್ರಮುಖ ಪಾತ್ರವಹಿಸುತ್ತಿದ್ದು, ಪ್ರತಿಯೊಬ್ಬರೂ ಅವರೊಂದಿಗೆ ಕೈಜೋಡಿಸಬೇಕು ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತರು ತಾಲೂಕಿನಲ್ಲಿರುವ ಸಮಸ್ಯೆಗಳನ್ನು ಅಧಿಕಾರಿ, ಜನ ಪ್ರತಿನಿಧಿಗಳಿಗೆ ಗಮನಕ್ಕೆ ತಂದು ಪರಿಹಾರ ಸೂಚಿಸುವ ಕಾರ್ಯ ಮಾಡುತ್ತಿದ್ದಾರೆ. ಪತ್ರಕರ್ತರ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಜಿಲ್ಲಾ ಮಟ್ಟದ ಪತ್ರಕರ್ತರಿಗೆ ನೀಡುವ ದಿ.ಶಂಕರಗೌಡ ಪಾಟೀಲ್ ಸ್ಮಾರಕ ದತ್ತಿ ಪ್ರಶಸ್ತಿ ಸ್ಥಾಪಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಇಂದರ ಪಾಷಾ ಅವರನ್ನು ಸನ್ಮಾನಿಸಲಾಯಿತು.

ಪತ್ರಿಕೆ ವಿತರಿಸುವ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಿಸಲಾಯಿತು. ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯರು ಆಶೀವರ್ಚನ ನೀಡಿದರು. ಪತ್ರಕರ್ತ ಅಬ್ದುಲ್ ಅಜೀಜ್ ಮಾತನಾಡಿದರು.

ವೀರೇಶ ಸೌದ್ರಿ, ತಹಸೀಲ್ದಾರ್ ಅರಮನೆ ಸುಧಾ, ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net