ಕಲ್ಯಾಣ ಕರ್ನಾಟಕ ಅಭಿವೃದ್ಧಿ ಎಲ್ಲ ಶಾಸಕರ ಕರ್ತವ್ಯ

210722 Maski Cultural Bhavana Inngoaration
ಮಸ್ಕಿಯಲ್ಲಿ ಸಾಂಸ್ಕೃತಿಕ ಭವನವನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಗುರುವಾರ ಉದ್ಘಾಟಿಸಿದರು.
Published on

ಮಸ್ಕಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಹಗಲಿರಳು ದುಡಿಯುತ್ತಿದ್ದಾರೆ. ಸೇಡಂ ಕನಸು ನನಸು ಮಾಡುವುದು ಈ ಭಾಗದ ಎಲ್ಲ ಶಾಸಕರು ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ 22 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ಸಾಂಸ್ಕೃತಿಕ ಭವನವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಬಸವರಾಜ ಪಾಟೀಲ ಸೇಡಂ ಮತ್ತು ಅವರ ತಂಡ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಜನಪರ ಯೋಜನೆಗಳನ್ನು ಅರ್ಹರಿಗೆ ಕೊಟ್ಟಿರುವುದು ಹೆಗ್ಗಳಿಕೆಯಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಶೈಕ್ಷಣಿಕ ವಿಭಾಗದ ಮುಖ್ಯಸ್ಥೆ ಲೀಲಾ ಮಲ್ಲಿಕಾರ್ಜುನ ಮಾತನಾಡಿ, ಯಾವುದೇ ಪ್ರಚಾರವಿಲ್ಲದೆ ಸಂಸ್ಥೆಯು ಅನೇಕ ಕೆಲಸ ಮಾಡಿದೆ. ಕಲ್ಯಾಣ ಕರ್ನಾಟಕದಲ್ಲಿ 5 ಲಕ್ಷ ಮನೆಗಳಿಗೆ ಈ ಸಂಸ್ಥೆಯಿಂದ ಸಹಾಯ ನೀಡಿದ್ದು ನೀತಿ ಆಯೋಗದಿಂದ ಪ್ರಶಂಸೆಗೆ ಪಾತ್ರವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net