ರೈತರು ಸುಳ್ಳನ್ನು ನಂಬಬಾರದು ಎಂದು ಕೋರಿದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್

Pratapgowda Patil Maski
Published on

ಮಸ್ಕಿ: ಎನ್‌ಆರ್‌ಬಿಸಿ 5ಎ ಕಾಲುವೆ ವಿಚಾರದಲ್ಲಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಿರುವೆ. ರೈತರಿಗೆ ನನ್ನ ಬಗ್ಗೆ ತಪ್ಪು ಕಲ್ಪನೆ ಬರುವಂತೆ ಕೆಲವರು ಬಿಂಬಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈಗಾಗಲೇ ರೈತ ಹೊರಾಟಗಾರರನ್ನು ಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರೊಂದಿಗೆ ಭೇಟಿ ಮಾಡಿಸಿ ವಾಸ್ತವ ಸ್ಥಿತಿ ಮನವರಿಕೆ ಮಾಡಲಾಗಿದೆ. ಸರ್ಕಾರ ತಾಂತ್ರಿಕ ವರದಿ ಕೇಳಿದೆ. ಆದರೆ, ತಾಂತ್ರಿಕ ವರದಿ ಬಾರದ ಕಾರಣ ವಿಳಂಬವಾಗಿದೆ. ನಂದವಾಡಗಿ ಏತ ನೀರಾವರಿ ಯೋಜನೆ ಕಾಮಗಾರಿ ಆರಂಭವಾಗಿದ್ದು, ಎರಡನೇ ಹಂತದ ಕಾಮಗಾರಿ ಪೂರ್ಣಗೊಂಡರೆ 5ಎ ಕಾಲುವೆ ವ್ಯಾಪ್ತಿ ಗ್ರಾಮಗಳು ನೀರಾವರಿಗೆ ಒಳಪಡಲಿವೆ. ಚುನಾವಣೆ ಘೋಷಣೆ ಆಗುವ ಒಳಗಾಗಿ ಯೋಜನೆ ಅನುಷ್ಠಾನದ ಬಗ್ಗೆ ಘೋಷಣೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇದು ಅಸಾಧ್ಯ. ಸರ್ವೆ ಕಾರ್ಯ ಮುಗಿದ ನಂತರ ಪ್ರಮಾಣಿಕವಾಗಿ ಯೋಜನೆ ಅನುಷ್ಠಾನದ ಬಗ್ಗೆ ಪ್ರಯತ್ನಿಸುವೆ ಎಂದರು.

ಬಿಜೆಪಿ ಮುಖಂಡರಾದ ಮಹಾದೇವಪ್ಪಗೌಡ ಪಾಟೀಲ, ತಿಮ್ಮಗೌಡ ಗುಡದೂರು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಯ್ಯ ಸೊಪ್ಪಿಮಠ ಇದ್ದರು.

ಪಕ್ಷ ಬಿಡುವುದು ಅವರಿಗೆ ಬಿಟ್ಟದ್ದು ತುಂಗಭದ್ರಾ ಕಾಡ ಅಧ್ಯಕ್ಷ ಬಸನಗೌಡ ತುರ್ವಿಹಾಳ ಪಕ್ಷ ಬಿಡುವುದು ಅವರಿಗೆ ಬಿಟ್ಟ ವಿಚಾರ. ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಮಾಣಿಕ ಪ್ರಯತ್ನ ಮಾಡಲಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ಮುಖಂಡರು ಹುಬ್ಬಳ್ಳಿಯಲ್ಲಿ ನಡೆಸಿದ ಸಂಧಾನ ಸಭೆಯಲ್ಲಿ ಪಕ್ಷದಲ್ಲಿ ಉಳಿಯುವುದಾಗಿ ತಿಳಿಸಿದ್ದಾರೆ. ಅವರ ಹಿಂಬಾಲಕರು ಕಾಂಗ್ರೆಸ್ ಸೇರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಯಾವುದೇ ಕ್ಷಣದಲ್ಲಿ ಉಪ ಚುನಾವಣೆಯಲ್ಲಿ ಘೋಷಣೆಯಾಗಲಿ, ಚುನಾವಣೆ ಎದುರಿಸಲು ಸಿದ್ಧ | ಪ್ರತಾಪಗೌಡ ಪಾಟೀಲ್, ಮಾಜಿ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net