

ಮಸ್ಕಿ: ಪಟ್ಟಣದಲ್ಲಿ ಕಾಯಂ ನ್ಯಾಯಾಲಯ ಆರಂಭಿಸುವಂತೆ ಆಗ್ರಹಿಸಿ ಕಾನೂನು ಸಚಿವ ಎಚ್.ಕೆ.ಪಾಟೀಲಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಶುಕ್ರವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮಸ್ಕಿಯಲ್ಲಿ ಸಂಚಾರ ನ್ಯಾಯಾಲಯ ಆರಂಭಿಸಲಾಗಿದೆ. ದಿನೇ ದಿನೆ ಪ್ರಕರಣಗಳ ಸಂಖ್ಯೆ ಹೆಚ್ಚುತಿರುವುದರಿಂದ ಕಕ್ಷಿದಾರರಿಗೆ ತುಂಬಾ ಸಮಸ್ಯೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಸ್ಕಿ ತಾಲೂಕಿಗೆ ಪೂರ್ಣ ಪ್ರಮಾಣದ ನ್ಯಾಯಾಲಯ ಸ್ಥಾಪಿಸುವಂತೆ ಒತ್ತಾಯಿಸಿದರು. ಆದಷ್ಟು ಬೇಗ ಮಸ್ಕಿಯಲ್ಲಿ ಕಾಯಂ ನ್ಯಾಯಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಸಚಿವ ಎಚ್.ಕೆ.ಪಾಟೀಲ್ ಭರವಸೆ ನೀಡಿದರು.