ಬೆಲೆ ಏರಿಕೆಯಿಂದ ಬದುಕು ದುಸ್ತರ

ಬೆಲೆ ಏರಿಕೆಯಿಂದ ಬದುಕು ದುಸ್ತರ
Published on

ಮಸ್ಕಿ: ಕರ್ನಾಟಕ ರಾಷ್ಟ್ರ ಸಮಿತಿಯಿಂದ ಸಮಗ್ರ ಅಭಿವೃದ್ಧಿ, ಸ್ವಚ್ಛ ಆಡಳಿತ ಹಾಗೂ ಲಂಚ ಮುಕ್ತ ಕರ್ನಾಟಕ ಸಾಧ್ಯ ಎಂದು ಪಕ್ಷದ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಹೇಳಿದರು.

ಪಟ್ಟಣದಲ್ಲಿ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಆದರೆ, ಕಳೆದ ಚುನಾವಣೆಯಲ್ಲಿ ಸೋತವರು ಹಾಗೂ ಗೆದ್ದವರು ಒಂದೇ ನಾಣ್ಯದ ಎರಡು ಮುಖಗಳಂತಿದ್ದು, ಅವರಿಂದ ಅಭಿವೃದ್ಧಿ ಆಗಿಲ್ಲ. ಜನರು ಹಣ ಕೊಟ್ಟು ನೀರು ಕುಡಿಯುವಂತಹ ಸ್ಥಿತಿ ನಿರ್ಮಿಸಲಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನಸಾಮಾನ್ಯರ ಕಷ್ಟ ಕೇಳೋರಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ದುಸ್ತರವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ನವರು ಗೆಲ್ಲಲು ಹಣ ಮತ್ತು ಮದ್ಯದ ಹೊಳೆ ಹರಿಸಲಿದ್ದಾರೆ. ಮತದಾರರು ಆಮಿಷಕ್ಕೆ ಒಳಗಾಗಬಾರದು ಎಂದು ಲಿಂಗೇಗೌಡ ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net