

ಮಸ್ಕಿ: ಕಲ್ಯಾಣ ಕರ್ನಾಟಕದ ಸಹಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರ ಸಂಘ 25 ವರ್ಷ ಪೂರೈಸಿರುವುದು ಖುಷಿಯ ಸಂಗತಿ ಎಂದು ಸಂಘದ ಅಧ್ಯಕ್ಷ ಡಾ.ಶಿವಶರಣಪ್ಪ ಇತ್ಲಿ ಹೇಳಿದರು.
ಪಟ್ಟಣದ ಶ್ರೀಭ್ರಮರಾಂಬ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಮಂಗಳವಾರ ರಜತ ಮಹೋತ್ಸವದ ಆಮಂತ್ರಣ ಬಿಡುಗಡೆ ಮಾಡಿ ಮಾತನಾಡಿದರು. ಬೆಳ್ಳಿಹಬ್ಬ ನಿಮಿತ್ತ ಮೇ 3, 4 ಮತ್ತು 5 ರಂದು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೇ 3ರಂದು ಸಂಜೆ 6 ಗಂಟೆಗೆ ಮಾಜಿ ಸಹಕಾರ ಸಚಿವ ಎಸ್.ಎಸ್.ಪಾಟೀಲ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು.
ಸಂತೆಕೆಲ್ಲೂರು ಘನಮಠೇಶ್ವರ ಮಠದ ಗುರುಬಸವ ಸ್ವಾಮೀಜಿ, ಮಸ್ಕಿ ಗಚ್ಚಿನ ಹಿರೇಮಠದ ವರರುದ್ರಮುನಿ ಶಿವಾಚಾರ್ಯರು, ಸಂಸದ ರಾಜಶೇಖರ ಹಿಟ್ನಾಳ, ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಹಂಪನಗೌಡ ಬಾದರ್ಲಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಪಾಟೀಲ್, ಸಹಕಾರ ಸಂಘಗಳ ಜಂಟಿ ನಿಬಂಧಕ ವಿಶ್ವನಾಥ ಮಲಕೊಡ ಭಾಗವಹಿಸಲಿದ್ದಾರೆ ಎಂದರು. ಮೇ 4ರಂದು ಬೆಳಗ್ಗೆ 10 ಗಂಟೆಗೆ ಕಲ್ಯಾಣ ಕರ್ನಾಟಕ ಸಹಕಾರಿಗಳಿಗೆ ಕಾರ್ಯಾಗಾರ ಏರ್ಪಡಿಸಲಾಗಿದೆ. ಕೊಪ್ಪಳ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರ ನುಡಿಬೆಳಗು ಪುಸ್ತಕ ಬಿಡುಗಡೆ ಮಾಡಲಾಗುವುದು. ಸಂಜೆ 6ಗಂಟೆಗೆ ಬಹಿರಂಗ ಸಭೆಯಲ್ಲಿ ಶಹಾಪುರದ ಗುರುಪಾದ ಸ್ವಾಮೀಜಿ ಸಾನ್ನಿಧ್ಯವಹಿಸುವರು.
ಮಾಜಿ ಸಂಸದ ಬಸವರಾಜ ಪಾಟೀಲ್ ಅನ್ವರಿ, ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ, ಕೆಒಎಫ್ ಅಧ್ಯಕ್ಷ ವೆಂಕಟರಾವ ನಾಡಗೌಡ, ಪ್ರಮುಖರಾದ ಗುರುನಾಥ ಜಾಂತೀಕರ್, ಶರಣಗೌಡ ಪಾಟೀಲ್ ಭಾಗವಹಿಸುವರು. ಮೇ 5ರಂದು ಸಂಜೆ 6 ಗಂಟೆಗೆ ಮೆದಕಿನಾಳ ಸುವರ್ಣಗಿರಿ ಸಂಸ್ಥಾನ ಮಠದ ಡಾ.ಚನ್ನಮಲ್ಲ ಸ್ವಾಮೀಜಿ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಸೌಹಾರ್ದ ಸಂಯುಕ್ತ ಸಹಕಾರ ಸಂಘದ ರಾಜ್ಯ ಅಧ್ಯಕ್ಷ ಜಿ.ನಂಜನಗೌಡ, ಲೆಕ್ಕ ಪರಿಶೋಧಕರಾದ ಎ.ಕೆ.ಚನ್ನಮಲ್ಲಿಕಾರ್ಜುನಗೌಡ, ಕೆ.ನಾಗನಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.