

ಮಸ್ಕಿ: ಶ್ರೀ ರಾಮಲಿಂಗೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಬೆಳ್ಳಿಹಬ್ಬ ನಿಮಿತ್ತ ಜು.12ರಂದು ನೂತನ ಕಟ್ಟಡವನ್ನು ಕೇಂದ್ರ ಸಚಿವ ವಿ.ಸೋಮಣ್ಣ ಉದ್ಘಾಟಿಸುವರು ಎಂದು ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಪಟ್ಟಣದ ಸಂಘದ ಕಚೇರಿಯಲ್ಲಿ ಭಾನುವಾರ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಜು.12ರ ಬೆಳಗ್ಗೆ 10.30 ಕ್ಕೆ ನೂತನ ಕಟ್ಟಡ ಉದ್ಘಾಟನೆ ನೆರವೇರಲಿದ್ದು, ನಂತರ ಶ್ರೀ ಭ್ರಮರಾಂಬ ದೇವಸ್ಥಾನದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಗಚ್ಚಿನ ಹಿರೇಮಠದ ಶ್ರೀವರ ರುದ್ರಮುನಿ ಶಿವಾಚಾರ್ಯರು, ಮಂಟೂರು ಆನಂದ ಆಶ್ರಮದ ಶ್ರೀ ಮಹಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಸದ ರಾಜಶೇಖರ ಹಿಟ್ನಾಳ, ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಹಂಪನಗೌಡ ಬಾದರ್ಲಿ, ಮಾನಪ್ಪ ವಜ್ಜಲ್, ಡಾ.ಶಿವರಾಜ ಪಾಟೀಲ್, ರಾಜ್ಯ ಸಂಯುಕ್ತ ಸಹಕಾರಿ ಅಧ್ಯಕ್ಷ ಜಿ.ನಂಜನಗೌಡ, ಕೇಂದ್ರ ಮಾಜಿ ಸಚಿವ ಬಸವರಾಜ ಪಾಟೀಲ್ ಆನ್ವರಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಶಾಸಕರದ ಮನೋಹರ ಮಸ್ಕಿ, ಬಸನಗೌಡ ಬ್ಯಾಗವಾಟ್, ಗಂಗಾಧರ ನಾಯಕ, ರಾಜ್ಯ ಸಂಯುಕ್ತ ಸಹಕಾರಿಯ ವ್ಯವಸ್ಥಾಪಕ ನಿರ್ದೆಶಕ ಶರಣೇಗೌಡ ಪಾಟೀಲ್, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಶ್ವನಾಥ ಪಾಟೀಲ್, ಶ್ರೀ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಡಾ.ಶಿವಶರಣಪ್ಪ ಇತ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.