

ಮಸ್ಕಿ: ಪಟ್ಟಣದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರೀನಿವಾಸ ಕಲ್ಯಾಣೋತ್ಸವ ಅದ್ದೂರಿಯಾಗಿ ನೆರವೇರಿತು.
ಬ್ರಾಹ್ಮಿ ಮೂಹೂರ್ತದಲ್ಲಿ ವೆಂಕಟೇಶ್ವರ ವಿಗ್ರಹಕ್ಕೆ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಭಜನಾ ಮಂಡಳಿಯಿಂದ ಭಜನೆ ನಡೆಯಿತು. ವೆಂಕಟೇಶ್ವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪುರೋಹಿತರಾದ ಹನುಮೇಶ ಆಚಾರ್ಯ ಬುದ್ದಿನ್ನಿ, ರಾಘವೇಂದ್ರ ಆಚಾರ್ಯ ಮರಕಮದಿನ್ನಿ ಕಲ್ಯಾಣೋತ್ಸವದ ನೇತೃತ್ವ ವಹಿಸಿದ್ದರು. ದೇವಸ್ಥಾನದಿಂದ ಬಾಲ ಮಾರುತಿ ದೇವಸ್ಥಾನದವರೆಗೆ ಪಲ್ಲಕ್ಕಿ ಸೇವೆ ನಡೆಯಿತು.